************
ನಮ್ಮಮ್ಮ ಶಾರದೆ ಉಮಾಮಹೇಶ್ವರಿ
ರಾಗ : ಮೋಹನ
ತಾಳ : ಅಟ್ಟ
ನಮ್ಮಮ್ಮ ಶಾರದೆ ಉಮಾಮಹೇಶ್ವರಿ
ನಿಮ್ಮೊಳಗಿಹನ್ಯಾರಮ್ಮ
ಕಮ್ಮಗೋಲನ ವೈರಿಸುತನಾದ ಸೊಂಡಿಲ
ಹೆಮ್ಮೆಯ ಗಣನಾಥನೆ
ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ
ಕೋರೆದಾಡೆಯವನ್ಯಾರಮ್ಮ
ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ
ಧೀರ ತಾ ಗಣನಾಥನೆ ಅಮ್ಮಯ್ಯ
ಉಟ್ಟದಟ್ಟಿಯು ಬಿಗಿದುಟ್ಟ ಚಲ್ಲಣದ
ದಿಟ್ಟಿ ತಾನಿವನ್ಯಾರಮ್ಮ
ಪಟ್ಟದ ರಾಣಿ ಪಾರ್ವತಿಯ ಕುಮಾರ
ಹೊಟ್ಟೆಯ ಗಣನಾಥನೆ ಅಮ್ಮಯ್ಯ
ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ
ಭಾಶಿಗನಿವವ್ಯಾರಮ್ಮ ಲೇಸಾಗಿ ಜನರ ಸಲಹುವ ಕಾಗಿನೆಲೆಯಾದಿ
ಕೇಶವ ದಾಸ ಕಾಣೆ ಅಮ್ಮಯ್ಯ
***********
Dikshitar Kritis - Alphabetical List
16 years ago
No comments:
Post a Comment